ನವದೆಹಲಿ:ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯನ್ನುಕಾಣುತ್ತಿದ್ದ ಕೊರೊನಾ ಪಾಸಿಟಿವ್ ಕೇಸ್ ಪ್ರಮಾಣದಲ್ಲಿ ಇಂದು ಕೊಂಚ ಮಟ್ಟಿಗೆ ಏರಿಕೆಯನ್ನು ಕಂಡಿದೆ. ಕಳೆದ 24 ಗಂಟೆಗಳಲ್ಲಿ 71,365 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 1,217 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,72,211 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸದ್ಯ 8,92,828 ಕೊರೊನಾ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ 4,24,10,976 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, 5,05,308 ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಇನ್ನು, ಭಾರತದಲ್ಲಿ ಈವರೆಗೆ ಒಟ್ಟು 4,10,12,869ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ದೈನದಿಂನ ಪಾಸಿಟಿವಿಟಿ ರೇಟ್ ಶೇ. 4.54ರಷ್ಟಿದೆ.