ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಾಖಲೆಯ ಮಟ್ಟದಲ್ಲಿ ಇಳಿಕೆಯನ್ನು ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 4,452 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 19,067ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, 51 ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ 39,06,761ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 37,94,866ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು ಕರ್ನಾಟಕದಲ್ಲಿ ಈವರೆಗೆ 39,447ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದ ದೈನಂದಿನ ಪಾಸಿಟಿವಿಟಿ ರೇಟ್ ಶೇ.5.01ರಷ್ಟಿದೆ.