ಮಂಗಳೂರು: ನಗರದ ಅಪಾರ್ಟ್ ಮೆಂಟ್ ನ ಪೆಂಟ್ ಹೌಸ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಏಳು ಆರೋಪಿಗಳನ್ನು ಬಂಧಿಸಿದ್ದು, ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.
ಅಪ್ರಾಪ್ತ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಈ ಹಿಂದೆ 3 ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೆ 7 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ 10 ಆರೋಪಿಗಳಲ್ಲಿ 7 ಆರೋಪಿಗಳು “ಸಂಘಟಿತ ವೇಶ್ಯಾವಾಟಿಕೆ ದಂಧೆ” ನಡೆಸುತ್ತಿದ್ದರು. ಈ ವೇಶ್ಯಾವಾಟಿಕೆಯು ಯಾರ ಗಮನಕ್ಕೆ ಬಾರದ ಹಾಗೆ ಎರಡೂವರೆ ತಿಂಗಳಿನಿಂದ ಅಪಾರ್ಟ್ ಮೆಂಟ್ ನಲ್ಲಿ ನಡೆಯುತ್ತಿದೆ. ಇನ್ನು ಮುಂದೆ ತಮ್ಮ ಸುತ್ತಮುತ್ತಲು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಕೂಡಲೇ ಪೊಲೀಸರನ್ನು ಸಂಪರ್ಕಿಸುವಂತೆ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಬುಧವಾರ ತಿಳಿಸಿದ್ದಾರೆ.