ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 58,077 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಈವರೆಗೆ 4,25,36,137 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 657 ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಆ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 5,07,208 ಕ್ಕೆ ಏರಿಕೆಯಾಗಿದೆ. ಇನ್ನು, ಕಳೆದ 24 ಗಂಟೆಗಳಲ್ಲಿ 1,50,407 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,13,31,158ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 6,97,802 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.3.89ರಷ್ಟಿದೆ.