ನವದೆಹಲಿ: ದೇಶದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯನ್ನು ಕಾಣುತ್ತಿದೆ. ಕಳೆದ 24ಗಂಟೆಗಳಲ್ಲಿ ಹೊಸದಾಗಿ 50,407 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, 804 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,36,962 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಭಾರತದಲ್ಲಿ 6,10,443 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.3.48ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 4,25,86,544 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 4,14,68,120 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದಾಗಿ 5,08,012 ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.