ನವದೆಹಲಿ: ಭಾರತ ಸರ್ಕಾರದ ಸ್ಟಾಫ್ ಕಮಿಷನ್ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಳ ವಿಭಾಗದ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್, ಅಂಚೆ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಫೆಬ್ರವರಿ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 7ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಹೆಚ್ಚಿನ ವಿವರಗಳಿಗೆ https://ssc.nic.in/ ವೆಬ್ಸೈಟ್ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 2ಎ, 2ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 100ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪಿಡಬ್ಲ್ಯುಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು ಮಾರ್ಚ್ 7ರ ಒಳಗೆ ಆನ್ಲೈನ್, ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬಹುದು.