Sunday, June 8, 2025

ರಾಮ್ ರಾಜ್ ಗೆ ರಾಯಭಾರಿ ರಾಕಿ ಭಾಯ್

ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ತನ್ನ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ರಾಮ್ ರಾಜ್ ಕಾಟನ್ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಪ್ರಕಟಣೆಯಲ್ಲಿ ಕಂಪನಿಯು ನಟ ಯಶ್ ಅವರು ನಟನೆ ಮತ್ತು ಸಮಾಜಮುಖಿ ಕೆಲಸಗಳ ಮುಖಾಂತರ ತಮ್ಮ ಸುತ್ತಲಿನವರನ್ನು ನಿರಂತರವಾಗಿ ಹುರಿದುಂಬಿಸುತ್ತಾರೆ. ಆದ್ದರಿಂದ ಅವರನ್ನು ರಾಮ್ ರಾಜ್ ನ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.

ನಮ್ಮ ಬ್ರ್ಯಾಂಡ್ ಗೆ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ರಾಯಭಾರಿಯಾಗಿ ಮಾಡಿಕೊಳ್ಳುವುದು ಹೆಮ್ಮೆಯ ಸಂಗತಿ. ಯಶ್ ಅವರು ಕಠಿಣ ಪರಿಶ್ರಮದಿಂದ ತಮ್ಮ ಕನಸನ್ನು ನನಸಾಗಿಸಿಕೊಂಡವರು. ಇವರು ಸಮಾಜಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡುತ್ತಿದ್ದಾರೆ. ನಾವು ಯಶ್ ಅವರೊಂದಿಗೆ ಭಾರತದ ಫ್ಯಾಷನ್ ಪ್ರಪಂಚದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡಲಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles