ಮಂಗಳೂರು: ‘ಸಹಕಾರ ರತ್ನ’ ಡಾ.ಎಂ.ಎನ್.ರಾಜೇಂದ್ರ ಕುಮಾರ್ 73 ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ ಫೆ.24ರಂದು ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಂಭಾಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಗಮದ ಅಧ್ಯಕ್ಷ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿಗಮದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿಗಮದ ಅಧ್ಯಕ್ಷ ಬಿ.ಪ್ರಸಾದ್ ಕೌಶಲ್ ಶೆಟ್ಟಿ, ಉದ್ಯಮಿ ನಾಡೋಜ ಡಾ.ಜಿ.ಶಂಕರ್, ಮುಂಬೈ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.