ಮುಂಬೈ: ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಬಪ್ಪಿ ಲಹರಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಈ ಹಿಂದೆ ಬಪ್ಪಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಕಳೆದ ಒಂದು ತಿಂಗಳಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಮಂಗಳವಾರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು.
ಡಿಸ್ಕೋ ಹಾಡುಗಳಿಗೆ ಪ್ರಸಿದ್ಧರಾದ ಬಪ್ಪಿ ಅವರು ಸಂಗೀತ ನಿರ್ದೇಶನದೊಂದಿಗೆ, ಹಿಂದಿ, ಕನ್ನಡ, ತಮಿಳು, ತೆಲುಗು ಚಿತ್ರಗಳಲ್ಲಿ ಹಾಡಿದ್ದಾರೆ. ಬಪ್ಪಿ ಅವರು ಅಪಾರ ಅಭಿಮಾನಿಗಳನ್ನು ಸಂಗೀತ ಪ್ರಿಯರನ್ನು ಅಗಲಿದ್ದಾರೆ.