Sunday, June 8, 2025

2008ರ ಅಹಮದಾಬಾದ್‌ ಸರಣಿ ಬಾಂಬ್‌ ಸ್ಫೋಟ: 38 ಅಪರಾಧಿಗಳಿಗೆ ಮರಣದಂಡನೆ

ಗಾಂಧಿನಗರ: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ 49 ಅಪರಾಧಿಗಳ ಪೈಕಿ UAPS ಪ್ರಕಾರ 38 ಅಪರಾಧಿಗಳಿಗೆ ಮರಣದಂಡನೆ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲು ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 77 ಮಂದಿಯನ್ನು ಆರೋಪಿಗಳೆಂದು ಪೊಲೀಸರು ಬಂಧಿಸಿದ್ದರು. 77 ಮಂದಿಯಲ್ಲಿ 28 ಮಂದಿಯನ್ನು ಗುಜರಾತ್‌ನ ವಿಶೇಷ ನ್ಯಾಯಾಲಯ ಫೆಬ್ರವರಿ 8ರಂದು ಬಿಡುಗಡೆ ಮಾಡಿ ಉಳಿದ 49 ಮಂದಿಯನ್ನು ಅಪರಾಧಿಗಳೆಂದು ಪರಿಗಣಿಸಿತ್ತು. ಅಪರಾಧಿಗಳು ವಿಚಾರಣೆಗೆ ಅಹಮದಾಬಾದ್, ಭೋಪಾಲ್, ಗಯಾ, ಬೆಂಗಳೂರು ಮತ್ತು ದೇಶದ ಇತರ ಭಾಗಗಳಲ್ಲಿನ ಜೈಲುಗಳಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.

ಜುಲೈ 26, 2008 ರಲ್ಲಿ ಅಹಮದಾಬಾದ್​ ವಿವಿಧ ನಗರದಲ್ಲಿ 20 ಬಾಂಬ್‌ಗಳು ಸ್ಫೋಟಗೊಂಡಿತ್ತು. ಸ್ಪೋಟದಲ್ಲಿ 56 ಜನರು ಮೃತರಾಗಿದ್ದು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಸ್ಫೋಟದಲ್ಲಿ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದೀನ್ (IM) ಸದಸ್ಯರು ಭಾಗಿಯಾಗಿದ್ದು, ಇವರು 2002ರ ಗೋಧ್ರಾ ನಂತರದ ಗಲಭೆಗೆ ಪ್ರತೀಕಾರವಾಗಿ ಸ್ಫೋಟಕ್ಕೆ ಯೋಜನೆ ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles