ಉಡುಪಿ: ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಕಾಲೇಜಿನೊಳಗೆ ಬರಲು ನಿರಾಕರಿಸಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿಯ ಕಲ್ಯಾಣಪುರದಲ್ಲಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಇಂದು ನಡೆದಿದೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಕೇಸರಿ ಶಾಲುಗಳಂತಹ ಧಾರ್ಮಿಕ ಉಡುಪುಗಳನ್ನು ಧರಿಸಬಾರದೆಂಬ ನ್ಯಾಯಾಲಯದ ಮಧ್ಯಂತರ ಆದೇಶದ ಬೆನ್ನಲ್ಲೇ ಕೆಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಿಲಾಗ್ರೀಸ್ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಕಾಲೇಜಿನೊಳಗೆ ಬರಲು ನಿರಾಕರಿಸಿ ಹಿಜಾಬ್‌ಗಾಗಿ ಪಟ್ಟು ಹಿಡಿದು ಕಾಂಪೌಂಡ್ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದಾರೆ.