ಅಜ್ಜರಕಾಡು: ರಾಷ್ಟ್ರಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಹೇಳಿಕೆ ಕೊಟ್ಟಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.
ಈಶ್ವರಪ್ಪ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಡಬೇಕು. ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡರಾದ ನಾಗೇಶ್ ಉದ್ಯಾವರ, ರಮೇಶ್ ಕಾಂಚನ್, ಯತೀಶ್ ಕರ್ಕೇರ, ಪ್ರಶಾಂತ್ ಜತ್ತನ್ನ ಮತ್ತಿತರು ಉಪಸ್ಥಿತರಿದ್ದರು.