ಬೆಂಗಳೂರು: ಕೇಳುಗರ ಪ್ರೀತಿಯ ಮಾತಿನ ಮಲ್ಲಿ ಆರ್‌ಜೆ ರಚನಾ ಅವರು ಮಂಗಳವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಚನಾ ಅವರಿಗೆ ಜೆ.ಪಿ. ನಗರದ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಕಾರ್ಡಿಯಾಕ್ ಅರೆಸ್ಟ್ ಆಗಿದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ. ರೇಡಿಯೋ ಜಾಕಿ ಕೆಲಸ ಮಾಡುತ್ತಿದ್ದ ಅವರು ಮೂರು ವರ್ಷಗಳ ಹಿಂದೆ ಕೆಲಸ ಬಿಟ್ಟಿದ್ದರು. ಕಳೆದ ಕೆಲ ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಹೆಚ್ಚು ಜನರ ಜೊತೆ ಬೆರೆಯುತ್ತಿರಲಿಲ್ಲ ಎನ್ನಲಾಗಿದೆ.
ರಚನಾ ಅವರು ರಕ್ಷಿತ್ ಶೆಟ್ಟಿ ಅವರ ‘ಸಿಂಪಲ್ಲಾಗಿ ಒಂದು ಲವ್ ಸ್ಟೋರಿ’ ಚಿತ್ರದಲ್ಲಿ ಸಹೋದರಿಯಾಗಿ ನಟಿಸಿದ್ದರು. ರೇಡಿಯೋ ಮಿರ್ಚಿಯಲ್ಲಿ ರೇಡಿಯೋ ಜಾಕಿ ಆಗಿ ಕೆಲಸ ಮಾಡುತ್ತಿದ್ದ ಅವರು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.