Monday, June 30, 2025

ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ಚಿತ್ರನಟಿ ಹಾಗೂ ರಂಗಭೂಮಿ ಕಲಾವಿದೆ ಕೆಪಿಎಸಿ ಲಲಿತಾ(74) ಅವರು ಮಂಗಳವಾರ ರಾತ್ರಿ ಕೇರಳದ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನಟಿ ಲಲಿತಾ ಅವರು ಕೆಲವು ತಿಂಗಳಿನಿಂದ ಯಕೃತ್ತು ವೈಫಲ್ಯ ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಐದು ದಶಕಗಳ ತಮ್ಮ ಸಿನಿಜೀವನದಲ್ಲಿ ಮಲಯಾಳಂ ಹಾಗೂ ತಮಿಳಿನಲ್ಲಿ 550ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಹಾಗೂ ಕೇರಳ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಐದು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ.

ಲಲಿತಾ ಅವರಿಗೆ ನಾಲ್ಕು ಕೇರಳ ರಾಜ್ಯ ಪ್ರಶಸ್ತಿ, ಇವರ ‘ಅಮರಂ’ ಮತ್ತು ‘ಶಾಂತಂ’ ಚಿತ್ರದ ಪಾತ್ರಕ್ಕಾಗಿ ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಹಾಗೂ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles