ಉಡುಪಿ: ಕೋರ್ಟ್ ತೀರ್ಪು ಬರುವವರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡುವಂತೆ ಹಿಜಾಬ್ ಹೋರಾಟಗಾರ್ತಿಯರಾದ 5 ಮಂದಿ ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ.
ಹಿಜಾಬ್ ಹಕ್ಕಿಗಾಗಿ ಹೋರಾಟ ನಡೆಸಿ ಹೈಕೋರ್ಟ್ ಮೆಟ್ಟಿಲೇರುವ ವಿದ್ಯಾರ್ಥಿನಿಯರು ಉಡುಪಿಯಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿ ನಮ್ಮ ಮೇಲೆ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಲ್ಲ. ನಮ್ಮ ಮನೆಯವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಕೂಡಲೇ ಕ್ರಮ ಕೈ ಗೊಳ್ಳಬೇಕು. ಹಿಜಾಬ್ ವಿವಾದ ಒಂದು ಪೊಲಿಟಿಕಲ್ ಗೇಮ್. ಎಲ್ಲಾ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನಿಂದ ಹೊರಗಿದ್ದಾರೆ. ನ್ಯಾಯಾಲಯದ ತೀರ್ಪು ಬರುವವರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಬಾರದು ಎಂದು ಆಗ್ರಹಿಸಿದರು.