ಮಂಗಳೂರು: ಹಿಜಾಬ್ಗಾಗಿ ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಘಟನೆ ಮಂಗಳೂರಿನ ಉಳ್ಳಾಲದ ಭಾರತೀ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.
ಹಿಜಾಬ್ ಧರಿಸಿ ಕಾಲೇಜಿನೊಳಗೆ ಪ್ರವೇಶಕ್ಕೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಕಾಲೇಜಿನ ಕೌಪೌಂಡ್ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತರಗತಿಯಲ್ಲಿದ್ದ ಇತರ ಮುಸ್ಲಿಂ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರಿಗೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಈ ಸಂದರ್ಭ ಪೊಲೀಸರು ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಲು ಯತ್ನಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ರಜೆ ಘೋಷಿಸಿದೆ.