ಹೆಬ್ರಿ: ಹಿಂದೂ ಜಾಗರಣ ವೇದಿಕೆ ಹೆಬ್ರಿ ಹಾಗೂ ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಉಡುಪಿ ಮತ್ತು ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಹೆಬ್ರಿಯ ಶ್ರೀರಾಮಮಂದಿರದಲ್ಲಿ ಶನಿವಾರ ನಡೆಯಿತು.
ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ಉದ್ಯಮಿ ಬೆಳ್ವೆ ಗಣೇಶ್ ಕಿಣಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ನ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದ ವೈದ್ಯರು, ಹಿಂದೂ ಜಾಗರಣ ವೇದಿಕೆಯ ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷರು, ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.