ಹೆಬ್ರಿ: ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲ್ಲೂಕಿನ ವರಂಗ ಗ್ರಾ.ಪಂ. ವ್ಯಾಪ್ತಿಯ ಮೂಡುಬೆಟ್ಟು ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಸುಂದರಿ ಪೂಜಾರಿ(60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದರು. ಬೆಳಿಗ್ಗೆ ಮನೆಯವರು ನೋಡುವಾಗ ಮನೆಯ ಒಳಗೆ ಇವರು ಕಾಣಲಿಲ್ಲ ನಂತರ ಹುಡುಕಾಡಿದಾಗ ಮನೆ ಹಿಂಬದಿ ಮಲಗಿದ ಸ್ಥಿತಿಯಲ್ಲಿದ್ದರು.
ಹೆಬ್ರಿ ಆಸ್ಪತ್ರೆಗೆ ಅವರನ್ನು ಕರೆತಂದು ವೈದ್ಯರು ಪರೀಕ್ಷಿಸಿದಾಗ ಯಾವುದೋ ವಿಷ ಪದಾರ್ಥ ಸೇವಿಸಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.