Sunday, June 8, 2025

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಯುವಕ ಸ್ಥಳದಲ್ಲೇ ಸಾವು

ಕುಂದಾಪುರ: ಉತ್ತರಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರದ ಕಿರಿಮಂಜೇಶ್ವರ ಸಮೀಪ ಬುಧವಾರ ಸಂಜೆ ನಡೆದಿದೆ‌.

ಮೃತ ಯುವಕನನ್ನು ಬೆಂಗಳೂರು ಮೂಲದ ಅಕ್ಷಯ್‌ (23) ಎಂದು ಗುರುತಿಸಲಾಗಿದೆ. ಬೆಂಗಳೂರು ಮೂಲದ ನಾಲ್ವರು ಯುವಕರು ಪ್ರವಾಸಕ್ಕೆಂದು ಇನ್ನೋವಾ ಕಾರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಾಣಕ್ಕೆ ಆಗಮಿಸಿ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ಕಿರಿಮಂಜೇಶ್ವರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಮಗ್ಗುಲಿಗೆ ಹೋಗಿ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಅಕ್ಷಯ್‌ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರು ಪ್ರಯಾಣಿಕರಾದ ತೇಜಸ್‌, ಪವನ್‌ ಮತ್ತು ಹರ್ಷಗೆ ಗಂಭೀರ ಗಾಯಗಳಾಗಿದ್ದು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles