Sunday, June 8, 2025

ಸಾವಯವ ಸಿರಿ ಯೋಜನೆಗೆ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು, ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ದೊರಕಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದೆ.
ಸಾವಯವ ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡ ಹಾಗೂ 10 ವರ್ಷಗಳ ಅನುಭವವಿರುವ ಟ್ರಸ್ಟ್ ಹಾಗೂ ಸೊಸೈಟಿ ಕಾಯಿದೆಯಡಿ ನೋಂದಾಯಿತ ಸಾವಯವ ಕೃಷಿಕರ ಸಂಘ, ಸಾವಯವ ಒಕ್ಕೂಟ ಅಥವಾ ಸಾವಯವ ಗುಂಪುಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮಾರ್ಚ್ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles