ಕಾಪು: ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇನ್ನಂಜೆ – ಕಲ್ಲುಗುಡ್ಡೆ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಮೃತ ವ್ಯಕ್ತಿಯನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಪೆಟ್ಟಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಪ್ಪರ್ ನ ಹಿಂಬದಿಯ ಚಕ್ರದಡಿಗೆ ಸಿಲುಕಿದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.