ಉಡುಪಿ: ಪವರ್ ಸಂಸ್ಥೆಯ ಆಶ್ರಯದಲ್ಲಿ ಚಾರ್ಟರ್ ಡೇ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಣಿಪಾಲದ ಕಂಟ್ರಿ ಇನ್ ಸಭಾಂಗಣದಲ್ಲಿ ಮಾ.9ರ ಸಂಜೆ 5.30ಕ್ಕೆ ನಡೆಯಲಿದೆ ಎಂದು ಪವರ್ ಸಂಸ್ಥೆಯ ಅಧ್ಯಕ್ಷೆ ತಾರಾ ತಿಮ್ಮಯ್ಯ ತಿಳಿಸಿದ್ದಾರೆ.
ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪವರ್ ಸಂಸ್ಥೆಯ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜರುಗಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಚಿತ್ರನಟಿ ವಿನಯಾ ಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪೂನಂ ಶೆಟ್ಟಿ, ಉಪಾಧ್ಯಕ್ಷರಾಗಿ ಸುವರ್ಷ ಮಿನ್ಜ್, ಕಾರ್ಯದರ್ಶಿಯಾಗಿ ಅರ್ಚನಾ ರಾವ್, ಕೋಶಾಧಿಕಾರಿಯಾಗಿ ಪ್ರತಿಭಾ ಆರ್.ವಿ. ಹಾಗೂ ಜೊತೆ ಕಾರ್ಯದರ್ಶಿಯಾಗಿ ತೃಪ್ತಿ ನಾಯಕ್ ಪದಗ್ರಹಣ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭ ಸಂಸ್ಥೆಯ ಕಾರ್ಯದರ್ಶಿ ಪ್ರಿಯಾ ಕಾಮತ್, ಕೋಶಾಧಿಕಾರಿ ಶಾಲಿನಿ ಬಂಗೇರ, ನೂತನ ಅಧ್ಯಕ್ಷೆ ಪೂನಂ ಶೆಟ್ಟಿ, ಕಾರ್ಯದರ್ಶಿ ಅರ್ಚನಾ ರಾವ್, ಕೋಶಾಧಿಕಾರಿ ಪ್ರತಿಭಾ ಆರ್.ವಿ., ಸಂಸ್ಥಾಪಕ ಅಧ್ಯಕ್ಷೆ ರೇಣು ಜಯರಾಮ್ ಉಪಸ್ಥಿತರಿದ್ದರು.
ಮಾ.9: ಪವರ್ ಸಂಸ್ಥೆ ಆಶ್ರಯದಲ್ಲಿ ‘ಚಾರ್ಟರ್ ಡೇ’ ಹಾಗೂ ‘ಮಹಿಳಾ ದಿನಾಚರಣೆ’ ಕಾರ್ಯಕ್ರಮ
Subscribe
Login
0 Comments