ಬೆಂಗಳೂರು: ಮಾ.17 ರಂದು ಬಿಡುಗಡೆಗೊಳ್ಳಲಿರುವ ಪುನೀತ್ ರಾಜ್‌ಕುಮಾರ್ ನಟನೆಯ ಜೇಮ್ಸ್ ಚಿತ್ರವು ವಿಶ್ವಾದ್ಯಂತ 4000 ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಚಿತ್ರತಂಡ ತಿಳಿಸಿದೆ.
ಜೇಮ್ಸ್ ಚಿತ್ರವು ಐದು ಭಾಷೆಗಳ್ಲಿ ಬಿಡುಗಡೆಗೊಳ್ಳಲಿದ್ದು, ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ಯು/ಎ ಪ್ರಮಾಣಪತ್ರ ನೀಡಿದೆ. ಕರ್ನಾಟಕದ 400 ಚಿತ್ರಮಂದಿರಗಳಲ್ಲಿ ಜೇಮ್ಸ್ ಚಿತ್ರ ಪ್ರದರ್ಶನಗೊಳ್ಳಲಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನ ಚಿತ್ರಮಂದಿರಗಲ್ಲಿ ಪುನೀತ್ ರಾಜ್‌ಕುಮಾರ್ ಅವರ 81 ಅಡಿ ಎತ್ತರದ ಕಟೌಟ್ ಹಾಕಲಾಗುತ್ತದೆ.
ಪುನೀತ್ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಆಗಿರುವುದರಿಂದ ರಾಜ್ಯಾದ್ಯಂತ ಚಿತ್ರಮಂದಿರಗಳು ಒಂದು ವಾರ ಜೇಮ್ಸ್ ಚಿತ್ರ ಮಾತ್ರ ಪ್ರದರ್ಶಿಸುವುದರೊಂದಿಗೆ ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸಲು ಯೋಜನೆ ರೂಪಿಸುತ್ತಿವೆ.