Sunday, June 8, 2025

ಉಕ್ರೇನ್‌ನಲ್ಲಿ ಯುದ್ಧ ನಿಂತ ಬಳಿಕ ನವೀನ್ ಮೃತದೇಹ ಭಾರತಕ್ಕೆ ರವಾನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮಾ.1ರಂದು ಉಕ್ರೇನ್‌ನಲ್ಲಿ ರಷ್ಯಾ ಸೇನೆಯ ಶೆಲ್‌ ದಾಳಿಗೆ ಮೃತಪಟ್ಟ ಹಾವೇರಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವು ಉಕ್ರೇನ್‌ನ ಶವಾಗಾರದಲ್ಲಿದೆ. ಅಲ್ಲಿ ಯುದ್ಧ ನಡೆಯುತ್ತಿರುವುದರಿಂದ ಮೃತದೇಹ ತರಲು ಕಷ್ಟವಾಗುತ್ತಿದ್ದು, ಯುದ್ಧ ನಿಂತ ತಕ್ಷಣ ತರುವ ಪ್ರಯತ್ನ ಮಾಡಲಾಗುತ್ತದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿದೇಶಾಂಗ ಸಚಿವರು ಸಂಬಂಧಪಟ್ಟ ರಾಯಭಾರ ಕಚೇರಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಸರ್ಕಾರ ಮೃತದೇಹ ಭಾರಕ್ಕೆ ತರುವ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles