ಪಡುಬಿದ್ರಿ: ಬಂಟರ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಂಗಳವಾರ ನಡೆಯಿತು.
ಲಯನ್ಸ್ ಜಿಲ್ಲಾ ಕಾರ್ಡಿನೇಟರ್ ರಂಜನ ಶ್ರೀಧರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ದಂತವೈದ್ಯೆ ಡಾ.ಸೌಮ್ಯಲತಾ ಕೆ ಶೆಟ್ಟಿ, ಮತ್ತು ರಾಷ್ಟ್ರೀಯ ಪವರ್ ಲಿಫ್ಟರ್ ಕುಮಾರಿ ಸೀಯ ಶೆಟ್ಟಿ, ಡಾ.ಸ್ಪೂರ್ತಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪಡುಬಿದ್ರಿ ಬಂಟರ ಸಂಘದ ಮಹಿಳಾ ಘಟಕ ಅಧ್ಯಕ್ಷೆ ನೇತ್ರಾವತಿ.ಆರ್.ಶೆಟ್ಟಿ, ಸುರವೈಲ್ ಜೆಸಿಐ ಅಧ್ಯಕ್ಷೆ ರಾಜೇಶ್ವರಿ.ಡಿ.ಶೆಟ್ಟಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷ ಶಶಿಧರ್.ಕೆ.ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ಪಡುಹಿತ್ಲು ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ , ಯುವ ಬಂಟರ ಸಂಘದ ಅಧ್ಯಕ್ಷ ನವೀನ.ಎಸ್.ಶೆಟ್ಟಿ ಮಹಿಳಾ ಘಟಕದ ಕಾರ್ಯದರ್ಶಿ ಜ್ಯೋತಿ.ಎಸ್.ಶೆಟ್ಟಿ, ಕೋಶಾಧಿಕಾರಿ ಜಯಂತಿ.ಎಸ್.ಶೆಟ್ಟಿ ಉಪಸ್ಥಿತರಿದ್ದರು.