Saturday, June 7, 2025

ಜಮ್ಮು&ಕಾಶ್ಮೀರ: ಸೇನಾಪಡೆ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಎನ್‌ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆದಿದ್ದು ನಾಲ್ಕು ಉಗ್ರರನ್ನು ಭಾರತೀಯ ಭದ್ರತಾ ಪಡೆ ಹತ್ಯೆ ಮಾಡಿದೆ.

ಹತ್ಯೆಯಾದ ನಾಲ್ವರು ಉಗ್ರರ ಪೈಕಿ ಇಬ್ಬರು  ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮದ್ ಉಗ್ರಗಾಮಿ ಸಂಘಟನೆಗೆ ಸೇರಿದವರು ಹಾಗೂ ಮತ್ತಿಬ್ಬರು ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಯಾಬಾ ಸಂಘಟನೆಗೆ ಸೇರಿದವರೆಂದು ತಿಳಿದುಬಂದಿದೆ.

ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ ಮೂರು ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆದಿವೆ. ರಾತ್ರಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರನ್ನು ಹಾಗೂ ಇಂದು ಬೆಳಿಗ್ಗೆ ನಡೆದ ಎನ್ಕೌಂಟರ್ ನಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles