ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಬಾಲಿವುಡ್‌ನ ‘ಕಾಶ್ಮೀರ ಫೈಲ್ಸ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ಮಾಡುವುದಾಗಿ ಘೋಷಿಸಿದೆ.
ಮಾ.11ರಂದು ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಈ ಚಿತ್ರಕ್ಕೆ ಹರಿಯಾಣ, ಗುಜರಾತ್ ಮತ್ತು ಮಧ್ಯಪ್ರದೇಶ ಸರ್ಕಾರಗಳು ತೆರಿಗೆ ವಿನಾಯಿತಿ ನೀಡಿದ್ದು, ಇದೀಗ ಕರ್ನಾಟಕವೂ ಈ ಸಾಲಿಗೆ ಸೇರಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ಮುಕ್ತ ಮಾಡಲಾಗಿದೆ. ರಾಜ್ಯದಲ್ಲಿ ಈ ಚಿತ್ರವನ್ನು ಪ್ರೋತ್ಸಾಹಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಂದು ತಿಳಿಸಿದ್ದಾರೆ.