ಉಳ್ಳಾಲ: ಬೈಕ್‌ಗಳೆರಡರ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನಿವೃತ್ತ ಅಧ್ಯಾಪಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ.
ಮೃತರನ್ನು ನಾಗಪ್ಪ (68) ಎಂದು ಗುರುತಿಸಲಾಗಿದೆ. ಇವರು ಫೆ.28ರಂದು ಎಕ್ಕೂರು ಕಡೆಯಿಂದ ವರ್ಕಾಡಿಯತ್ತ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.
ನಾಗಪ್ಪ ಅವರು ಕೊಡ್ಲಮೊಗರು ವಾಣಿವಿಜಯ ಹೈಸ್ಕೂಲಿನ ಅಧ್ಯಾಪಕರಾಗಿದ್ದರು. ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ನಿವೃತ್ತಿ ಬಳಿಕ ಮಂಜೇಶ್ವರ ರಾಗಂ ಜಂಕ್ಷನ್‌ನಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದರು.