Sunday, June 8, 2025

ಹೈಕೋರ್ಟ್‌ ತೀರ್ಪು ಕಡೆಗಣಿಸಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು; ಪರೀಕ್ಷೆ ಬರೆಯದೆ ಮನೆಗೆ ವಾಪಾಸ್

ಮಂಗಳೂರು: ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಕಡೆಗಣಿಸಿ ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.

ಕಾಲೇಜಿನಲ್ಲಿ ಪಿಯು ಪೂರ್ವ ಸಿದ್ದತಾ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಈ ವೇಳೆ ಕಾಲೇಜು ಆಡಳಿತ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ನಿರಾಕರಿಸಿದ ಹಿನ್ನಲೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ರೀತಿ ಕಾಲೇಜು ಬಳಿ ತುಂಬಾ ವಿದ್ಯಾರ್ಥಿಗಳು ಸೇರಿದ್ದರು. ಬಳಿಕ ಮುಸ್ಲಿಂ ಸಮುದಾಯದ ನಾಯಕರ ಮೂಲಕ ವಿದ್ಯಾರ್ಥಿಗಳ ಮನವೊಲಿಕೆ ಮಾಡಲಾಗಿದ್ದು, ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಕ್ಯಾಂಪಸ್ ನಿಂದ ಹೊರಕಳುಹಿಸಿದೆ. ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಮನೆಗೆ ವಾಪಾಸ್ ತೆರಳಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles