ಉಡುಪಿ: ಇಡೀ ದೇಶದಲ್ಲಿ ಕಾಂಗ್ರೆಸ್ ಸೋತಿದೆ. ಆದರೂ ಆ ಪಕ್ಷಕ್ಕೆ ಇನ್ನೂ ಬುದ್ಧಿ ಬಂದಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಕತ್ತು ಹಿಸುಕಿ ಸಾಯಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.
ಮಣಿಪಾಲದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಂಡಿದೆ. ಕರ್ನಾಟಕದಲ್ಲಿ ಸ್ವಲ್ಪ ಉಸಿರಾಡುತ್ತಿದೆ. ಆದರೂ ಕಾಂಗ್ರೆಸ್ ನಾಯಕರಿಗೆ ಬುದ್ಧಿ ಬಂದಿಲ್ಲ. ಒಬ್ಬ ವಕೀಲರಾಗಿದ್ದುಕೊಂಡು ಕೋರ್ಟ್ ತೀರ್ಪಿನ ವಿರುದ್ಧ ಮಾತನಾಡುವುದು ಸಿದ್ದರಾಮಯ್ಯನವರಿಗೆ ಶೋಭೆ ಅಲ್ಲ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ, ಡಿಕೆಶಿ ಸೇರಿ ಕಾಂಗ್ರೆಸನ್ನು ಕತ್ತು ಹಿಸುಕಿ ಸಾಯಿಸ್ತಾರೆ: ಸಚಿವೆ ಶೋಭಾ ಕರಂದ್ಲಾಜೆ
Subscribe
Login
0 Comments