Monday, June 9, 2025

ಕಾಂಗ್ರೆಸ್‌ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಮಂಗಳೂರು: ಕಾಂಗ್ರೆಸ್‌ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ‌ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರೊಂದಿಗೆ ಅವರು ಮಾತನಾಡಿದ ಹಿಜಾಬ್ ತೀರ್ಪಿನ ಕುರಿತು ಅಸಮಾಧಾನ ಇರೋರು ಬಂದ್ ಮಾಡಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧಿಸಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನ ಸಮಾನವಾಗಿ ಕಾಣುವ ಕೆಲಸ ಆಗಬೇಕು ಎಂದರು.

ನಾವು ಸಂವಿಧಾನದ ಜಾತ್ಯಾತೀತ ತತ್ವಗಳನ್ನು ನಂಬುತ್ತೇವೆ. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನ ಹೇಳಿಕೊಟ್ಟರೂ ನಮ್ಮ ವಿರೋಧ ಇಲ್ಲ. ಆದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಮನೆಯಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವರ ಬಗ್ಗೆ ಹೇಳಿ ಕೊಡುತ್ತಾರೆ. ನೈತಿಕ ಶಿಕ್ಷಣ ಬೇಕು. ಆದರೆ ಸಂವಿಧಾನಕ್ಕೆ ವಿರುದ್ದವಾಗಿ ಯಾವುದೂ ನಡೆಯಬಾರದು. ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದರ ವಿರೋಧಿಯಲ್ಲ. ನಮ್ಮದು ಬಹುಸಂಸ್ಕೃತಿ ಇರೋ ರಾಷ್ಟ್ರ. ನಮ್ಮಲ್ಲಿ ಸಹಿಷ್ಣುತೆ, ಸಹಬಾಳ್ವೆ ಇರಬೇಕು ಎಂದರು.

ಸಿನಿಮಾ ಮಾಡಿ ತೋರಿಸುವುದನ್ನು ಬೇಡ ಅನ್ನಲ್ಲ, ಆದರೆ ಸತ್ಯ ತೋರಿಸಲಿ. ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕಾರ ಇತ್ತು, ಏನ್ ಮಾಡಿತ್ತು ಸರ್ಕಾರ ಅಂತ ತೋರಿಸಬೇಕು. ಗುಜರಾತ್ ಘಟನೆ, ಲಖಿನ್ ಪುರ್ ಘಟನೆ ಎಲ್ಲವನ್ನು ತೋರಿಸಬೇಕು. ನಾನು ಸಿನಿಮಾಗೆ ಹೋಗಲ್ಲ, ಥಿಯೇಟರ್ ಹೋಗಿ ಸಿನಿಮಾ ನೋಡಲ್ಲ. ಹೆಚ್ಚು ಸಿನಿಮಾ ನೋಡಲ್ಲ, ಹಾಗೇನೇ ಕಾಶ್ಮೀರ್ ಫೈಲ್ ಕೂಡ ನೋಡಲ್ಲ ಎಂದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles