ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ತೋಟಕ್ಕೆ ಬಿದ್ದ ಘಟನೆ ಸುಳ್ಯ ತಾಲೂಕಿನ ಹರಿಹರದ ಮಲ್ಲಾರ ಬಳಿ ಭಾನುವಾರ ರಾತ್ರಿ ನಡೆದಿದೆ.
ನಡುಗಲ್ಲು ಕಡೆಯಿಂದ ಹರಿಹರಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾಗಿದೆ. ರೇಗನ್ ಶೆಟ್ಯಡ್ಕ ಅವರ ಕಾರನ್ನು ರೋಶನ್ ಎಂಬುವವರು ಚಲಾಯಿಸುತ್ತಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.