ಬೆಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಟಿಸಿದ ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವರ್ಗಾವಣೆ ಮಾಡಲಾಗಿದೆ.
ಕೊಲೆ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಯು ನವದೆಹಲಿಯ ವಿಶೇಷ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಈಗಾಗಲೇ ಪ್ರಕರಣದಲ್ಲಿ ಬಂಧಿತರಾಗಿರುವ ಹತ್ತು ಮಂದಿ ಶಂಕಿತ ಆರೋಪಿಗಳನ್ನು ಶೀಘ್ರವೇ ಎನ್ಐಎ ವಶಕ್ಕೆ ಪಡೆಯುವ ಸಾಧ್ಯತೆ ಇದೆ.