ಬೆಂಗಳೂರು: ಹಿಜಾಬ್ ಧರಿಸಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಬಂದರೆ ಪ್ರವೇಶ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.
ಮುಂಬರುವ 2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಹಾಗೂ ಆಯಾ ಶಾಲೆಗಳ ಆಡಳಿತ ಮಂಡಳಿ ನಿಗದಿ ಪಡಿಸಿದ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು ಎಂದು ಆದೇಶ ಹೊರಡಿಸಿದೆ.