ಮೂಡುಬಿದಿರೆ: ನಾಡಕಛೇರಿ ಹಿಂಭಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೂಡುಬಿದರೆ ತಾಲೂಕಿನ ಮಿನಿ ವಿಧಾನಸೌಧಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಆಡಳಿತ ಸೌಧವು ಸುಮಾರು ಎರಡು ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳುತ್ತಿದೆ. ಏ.27ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ. ನೂತನ ಕಟ್ಟಡದಲ್ಲಿ ತಹಸೀಲ್ದಾರ್ ಕಚೇರಿ, ಶಾಸಕರ ಕಚೇರಿ, ಉಪನೊಂದಣಾಧಿಕಾರಿ, ಸರ್ವೇ ಕಚೇರಿಗಳು ಇರಲಿವೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದರು.
ಈ ಸಂದರ್ಭ ಪುರಸಭಾಧ್ಯಕ್ಷ ಪ್ರಸಾದ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಪೂಜಾರಿ, ಮೂಡ ಅಧ್ಯಕ್ಷ ಮೇಘನಾದ ಶೆಟ್ಟಿ, ಪ್ರಮುಖರಾದ ಅಜಯ್ ರೈ, ಗೋಪಾಲ್ ಶೆಟ್ಟಿಗಾರ್, ಲಕ್ಷ್ಮಣ್ ಪೂಜಾರಿ, ಸಾತ್ವಿಕ್ ಮಲ್ಯ, ನಾರಾಯಣ ಶೆಟ್ಟಿ, ಪದ್ಮನಾಭ್ ಕೋಟ್ಯಾನ್, ಶಶಿಧರ್ ದೇವಾಡಿಗ, ಸಂತೋಷ್ ಅಂಚನ್, ಕಿಶೋರ್ ಉಪಸ್ಥಿತರಿದ್ದರು.
ಶಾಸಕರಿಂದ ಮಿನಿ ವಿಧಾನಸೌಧ ಪರಿಶೀಲನೆ
Subscribe
Login
0 Comments