ಬೆಳಗಾವಿ: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾದ ಹಿನ್ನಲೆ ಬೇರೆ ವಿದ್ಯಾರ್ಥಿಗಳ ಪರ ಪರೀಕ್ಷೆ ಬರೆಯುತ್ತಿದ್ದ 5 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಆರ್.ಡಿ ಕಾಲೇಜಿನಲ್ಲಿ ನಡೆದಿದೆ.
ವಿದ್ಯಾರ್ಥಿಗಳ ಪರ ಪರೀಕ್ಷೆ ಬರೆಯಲು ಬಂದಿದ್ದ ಓರ್ವ ಯುವತಿ ಸೇರಿ ಐದು ಮಂದಿ ಯುವಕರನ್ನು ಬಂಧಿಸಲಾಗಿದೆ. ಬಂಧಿತ ನಕಲಿ ವಿದ್ಯಾರ್ಥಿಗಳು ರಾಹುಲ್ ಕಿಳ್ಳಿಕೇತರ ಸಾಕಿನ್, ಭೀಮೇಶಿ ಹುಲಿಕುಂದ ವಾಡಿ, ಕಾರ್ತಿಕ್ ಲಚ್ಚಪ್ಪ ಜಿ.ಕುಂಬಾರ್, ಸಿದ್ದು ಮಾದೇವ್ ಜೋಗಿ, ಮಾಂತೇಶ್ ಸಂಗಪ್ಪ ಡೊಳ್ಳಿನವರ, ಸವಿತಾ ಮಾದೇವ.
ಪರೀಕ್ಷೆ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಬಂಧಿತರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.