ವಿಟ್ಲ: ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಚಲಾಯಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಸ್ಥಿತಿ ಗಂಭೀರವಾದ ಘಟನೆ ವಿಟ್ಲದ ಕೊಡಾಜೆಯಲ್ಲಿ ಮಂಗಳವಾರ ನಡೆದಿದೆ.
ಬೈಕ್ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಮಗಳು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಧರ್ಣಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
ಬಸ್ ಮತ್ತು ಬೈಕ್ ನಡುವೆ ಅಪಘಾತ; ಪೊಲೀಸ್ ಸಿಬ್ಬಂದಿ ಗಂಭೀರ
Subscribe
Login
0 Comments