ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ದ ಟೀಸರ್ ಅನ್ನು ಏ.2 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಮಂಗಳವಾರ ತಿಳಿಸಿದೆ.
ಇಂದು ಚಿತ್ರತಂಡ ಹೊಸ ಅಪ್ಡೇಟ್ ನೀಡುವುದಾಗಿ ಈ ಹಿಂದೆ ಘೋಷಿಸಿತ್ತು. ಅದರಂತೆ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಏ.2ರ ಬೆಳಿಗ್ಗೆ 9.55ಕ್ಕೆ ವಿಕ್ರಾಂತ್ ರೋಣದ ಟೀಸರ್ ಬಿಡುಗಡೆ ಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಚಿತ್ರದ ಪೋಸ್ಟರ್ಗಳು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಚಿತ್ರದ ಟೀಸರ್ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.