ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಮಂಗಳವಾರ ನಡೆಯಲಿಯುವ ಐಪಿಎಲ್ ಐದನೇ ಪಂದ್ಯದಲ್ಲಿ ಮುಖಾಮುಖಿ ಆಗಲಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಹೈದರಾಬಾದ್ ತಂಡವನ್ನು ಕೇನ್ ವಿಲಿಯಮ್ಸನ್, ರಾಜಸ್ಥಾನ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸಲಿದ್ದಾರೆ. ಈ ಎರಡೂ ತಂಡಗಳಿಗೂ ಐಪಿಎಲ್ 2022ರ ಚೊಚ್ಚಲ ಪಂದ್ಯ ಇದಾಗಿದ್ದು, ಗೆಲುವಿನ ಆರಂಭ ಯಾವ ತಂಡ ಮಾಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.