Sunday, June 8, 2025

ಎಂಸಿಸಿ ಬ್ಯಾಂಕ್ ಅವ್ಯವಹಾರ ಆರೋಪ ಸುಳ್ಳು; ಬ್ಯಾಂಕ್ ಸ್ಪಷ್ಟನೆ

ಮಂಗಳೂರು: ಶತಮಾನದ ಇತಿಹಾಸವಿರುವ ಮಂಗಳೂರು ಕ್ಯಾಥೊಲಿಕ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧ್ಯಕ್ಷ ಹಾಗೂ ನಿರ್ದೇಶಕರು ಅಧಿಕಾರವನ್ನು ಸಂಪೂರ್ಣ ದುರ್ಬಳಕೆ ಮಾಡಿ ಅವ್ಯವಹಾರ ನಡೆಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿರುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಎಂಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಮಾ.24ರಂದು ಮಂಗಳೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಬ್ಯಾಂಕ್ ಅಧ್ಯಕ್ಷ ಹಾಗೂ ನಿರ್ದೇಶಕರ ವಿರುದ್ಧ ಆರೋಪ ಮಾಡಿದ್ದು, ಅಂತಹ ಯಾವುದೇ ಘಟನೆಗಳು ನಮ್ಮ ಬ್ಯಾಂಕ್ ನಲ್ಲಿ ನಡೆದಿಲ್ಲ. ನಮ್ಮ ಬ್ಯಾಂಕ್ ಕಳೆದ 110 ವರ್ಷಗಳಿಂದ ನಿರಂತರವಾಗಿ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ನಾವು ಗ್ರಾಹಕಸ್ನೇಹಿ ಆಗಿದ್ದೇವೆ. ನಮ್ಮ ಬ್ಯಾಂಕ್ ಈಗಾಗಲೇ ಉತ್ತಮ ಲಾಭಾಂಶ ಪಡೆಯುತ್ತಿದ್ದು, ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಆದರೆ ಬ್ಯಾಂಕ್‌ನ ಹೆಸರು ಹಾಳು ಮಾಡುವುದಕ್ಕಾಗಿ ಈ ರೀತಿಯ ಸುಳ್ಳು ಸುದ್ದಿ ಹರಡುತ್ತಿರುವುದು ವಿಷಾದನೀಯ. ಈ ಬಗ್ಗೆ ನಾವು ಕೆಲವೇ ದಿನಗಳಲ್ಲಿ ದಾಖಲೆ ಸಹಿತಿ ಮಾಹಿತಿಯನ್ನು ನೀಡಲಿದ್ದೇವೆ ಎಂದು ಬ್ಯಾಂಕ್‌ನ ಆಡಳಿತ ಮಂಡಳಿ ತಿಳಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.

1 COMMENT

0 0 votes
Article Rating
Subscribe
Notify of
guest
1 Comment
Oldest
Newest Most Voted
Inline Feedbacks
View all comments
Shanthi monalisa
Shanthi monalisa
3 years ago

Its Good news

Stay Connected

2,500FansLike
1,333FollowersFollow
3,000SubscribersSubscribe

Latest Articles