ಲಾಸ್ ವೇಗಸ್: 64ನೇ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮವು ಲಾಸ್ ವೇಗಸ್ನ ಎಮ್.ಜಿ.ಎಮ್.ಗ್ರ್ಯಾಂಡ್ ಗಾರ್ಡನ್ನಲ್ಲಿ ಅದ್ದೂರಿಯಾಗಿ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಭಾರತೀಯ ಸಂಗೀತ ಸಂಯೋಜಕ ರಿಕ್ಕಿ ಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ದೊರೆತಿದೆ.
ಭಾರತೀಯ ಸಂಗೀತ ಸಂಯೋಜಕ ರಿಕ್ಕಿ ಕೇಜ್ ಮತ್ತು ಸ್ಟೀವರ್ಟ್ ಕೋಪ್ಲ್ಯಾಂಡ್ ಅವರ ‘ಡಿವೈನ್ ಟೈಡ್ಸ್’ ಆಲ್ಬಂಗೆ ‘ಬೆಸ್ಟ್ ನ್ಯೂ ಏಜ್ ಆಲ್ಬಂ’ ವಿಭಾಗದಲ್ಲಿ ಗ್ರ್ಯಾಮಿ ಪ್ರಶಸ್ತಿ ದೊರೆತಿದೆ. 2015ರಲ್ಲಿ ‘ವಿಂಡ್ಸ್ ಆಫ್ ಸಂಸಾರ’ ಆಲ್ಬಂಗೆ ರಿಕ್ಕಿ ಅವರಿಗೆ ಗ್ರ್ಯಾಮಿ ಪ್ರಶಸ್ತಿ ದೊರೆತಿದ್ದು, ಇದೀಗ ಎರಡನೇ ಬಾರಿಗೆ ಗ್ರ್ಯಾಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಭಾರತೀಯ ಸಂಗೀತ ಸಂಯೋಜಕ ರಿಕ್ಕಿ ಕೇಜ್ ಗೆ ಗ್ರ್ಯಾಮಿ ಪ್ರಶಸ್ತಿ
Subscribe
Login
0 Comments