Sunday, June 8, 2025

ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು; ಹಲವರು ಗಂಭೀರ

ಮಂಗಳೂರು: ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ಟ್ಯಾಂಕ್ ಶುಚಿಗೊಳಿಸುತ್ತಿದ್ದ ವೇಳೆ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಎಸ್ ಇ ಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್, ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ ಮೃತಪಟ್ಟಿದ್ದು, ಅಜನ್ ಆಲಿ, ಕರೀಬುಲ್ಲ ಮತ್ತು ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರಗೊಂಡಿದ್ದಾರೆ. ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಟ್ಯಾಂಕಿಗೆ ಇಳಿದಿದ್ದು, ಈ ವೇಳೆ ಆತ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದು, ಅವರೂ ಸಹ ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೀನು ಸಂಸ್ಕರಣಾ ಫ್ಯಾಕ್ಟರಿಯನ್ನು ಸದ್ಯ ಬಂದ್ ಮಾಡಲಾಗಿದ್ದು, ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles