ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್ ಬಳಿಯ ಶಾಂಭವಿ ಲಾಡ್ಜ್‌ನಲ್ಲಿ ಇನ್ನೋರ್ವ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಗಳೂರಿನ ಕೊಣಾಜೆಯ ಚರಣ್ ರಾಜ್(30) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಈತ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.