Sunday, July 27, 2025

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ; ಕೇಂದ್ರ ಸರ್ಕಾರದಿಂದ 5ರಾಜ್ಯಗಳಿಗೆ ಪತ್ರ

ದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ಕೇಂದ್ರ ಸರ್ಕಾರವು ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಿಜೋರಾಂ ಮತ್ತು ಮಹರಾಷ್ಟ್ರ ಸರ್ಕಾರಗಳಿಗೆ ಪತ್ರ ಬರೆದಿದ್ದು, ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಟೆಸ್ಟ್, ಟ್ರ್ಯಾಕ್, ಟ್ರೀಟ್‌ಮೆಂಟ್‌, ವ್ಯಾಕ್ಸಿನೇಷನ್ ಹೆಚ್ಚಿಸಿ ಹೆಚ್ಚು ಜನರ ಗುಂಪು ಸೇರದಂತೆ ನಿಗಾವಹಿಸಿ ಮಾಸ್ಕ್‌ ಕಡ್ಡಾಯಗೊಳಿಸುವಂತೆ, ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲು ಸಲಹೆ ನೀಡಿದ್ದಾರೆ.

ಕಳೆದೆರಡು ತಿಂಗಳಿನಿಂದ ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸತತವಾಗಿ ಇಳಿಕೆ ಕಂಡಿತ್ತು. ಆದರೆ ಇತ್ತೀಚೆಗೆ ಕೆಲ ರಾಜ್ಯಗಳಲ್ಲಿ ಹೆಚ್ಚಾಗುತ್ತಿರುವ ಸೋಂಕಿತ ಸಂಖ್ಯೆ ಹಾಗೂ ಪಾಸಿಟಿವಿಟಿ ದರವನ್ನು ನಿಯಂತ್ರಣಕ್ಕೆ ತರಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles