Monday, June 9, 2025

ಮಂಗಳೂರು: ಪ್ರಾಧ್ಯಾಪಕಿ ಬಗ್ಗೆ ಮಾನಹಾನಿಕರ ಪೋಸ್ಟರ್, ಮೂವರ ಬಂಧನ

ಮಂಗಳೂರು: ಪ್ರಾಧ್ಯಾಪಕಿ ಬಗ್ಗೆ ಮಾನಹಾನಿಕರ ಪೋಸ್ಟರ್ ಹಂಚಿಕೊಂಡ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರಕಾಶ್ ಶೆಣೈ (44), ಪ್ರದೀಪ್ ಪೂಜಾರಿ(36), ತಾರಾನಾಥ ಬಿ ಎಸ್ ಶೆಟ್ಟಿ(32) ಬಂಧಿತ ಆರೋಪಿಗಳು. ಕಾಲೇಜಿನಲ್ಲಿ ಪ್ರಾಧ್ಯಾಪಕಿ ಜೊತೆ ಇದ್ದ ಮನಸ್ತಾಪದ ಹಿನ್ನೆಲೆ ಆಕೆಯ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಮಾನಹಾನಿಕರ ಪತ್ರ ಹಂಚಿಕೊಂಡಿದ್ದಾರೆ. ಆರೋಪಿಗಳು ಪ್ರಾಧ್ಯಾಪಕಿ ಫೋಟೋ, ಮೊಬೈಲ್ ನಂಬರ್ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ತಯಾರಿಸಿದ್ದಾರೆ. ಅದನ್ನು ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿದ್ದಾರೆ.

ಪೋಸ್ಟರನ್ನು ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ಸ್ಟಾಂಡ್‌ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಪೋಸ್ಟರ್ ಹಾಕಿದ್ದಾರೆ. ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ನಡೆದ ಪ್ರಕರಣ ನಡೆದಿದ್ದು, ಪ್ರಕರಣದಲ್ಲಿ ಇನ್ನೂ ಕೆಲವರು ಬಾಕಿಯಿದೆ. ಹಾಗೂ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles