Saturday, June 7, 2025

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರಿದ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ

ಬೆಂಗಳೂರು:ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಸವರಾಜ್ ಹೊರಟ್ಟಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರೊಂದಿಗೆ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಬಳಿಕ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಬಸವರಾಜ್ ಹೊರಟ್ಟಿ, ಹಲವು ದಿನಗಳಿಂದ ಬಿಜೆಪಿ ಸೇರ್ಪಡೆ ಬಗ್ಗೆ ಚಿಂತನೆ ನಡೆಸಿದ್ದೆ. ಇದೀಗ ಅಮಿತ್ ಶಾ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದು ಖುಷಿ ತಂದಿದೆ ಎಂದರು.
ಇನ್ನು ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಹೊರಟ್ಟಿ ಸೇರ್ಪಡೆ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles