ನವದೆಹಲಿ: ಇತ್ತೀಚಿನ ದಿನಗಳಲ್ಲಿ ಜನರು ಬೆಲೆ ಏರಿಕೆಯಿಂದ ತತ್ತರಿಸಿದ ಹೋಗಿದ್ದಾರೆ. ಪೆಟ್ರೋಲ್ ಡೀಸೆಲ್ ಆಯ್ತು ಇದೀಗ ಗೃಹ ಬಳಕೆ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಶನಿವಾರದಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ.
ಕಳೆದ ವಾರ, 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102 ರೂಪಾಯಿ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಇದು ಸತತ ಮೂರನೇ ಮಾಸಿಕ ಹೆಚ್ಚಳವಾಗಿದೆ. ಮಾರ್ಚ್ನಲ್ಲಿ ಗೃಹ ಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಳವಾಗಿತ್ತು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪ್ರತಿ ಬಿಪಿಎಲ್ ಕುಟುಂಬಕ್ಕೆ ಉಚಿತ ಎಲ್‌ಪಿಜಿ ಸಂಪರ್ಕವನ್ನು ಒದಗಿಸಿತ್ತು. ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ, ಮೇ 1, 2016 ರಂದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಆರಂಭಿಸಿದ್ದರು.
ಬೆಲೆ ಏರಿಕೆಯ ಬಿಸಿ ಸಾಮನ್ಯ ಜನರಿಗೆ ತಟ್ಟುತ್ತಿದ್ದು, ಜನರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಇದೀಗ ಅಡುಗೆ ಅನಿಲ ಬೆಲೆಯಲ್ಲಿ ಏರಿಕೆಎಯಾಗಿರುವುದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಗೃಹ ಬಳಕೆಯ ಅಡುಗೆ ಅನಿಲ ಬೆಲೆಯಲ್ಲಿ 50 ರೂ. ಹೆಚ್ಚಳ
Subscribe
Login
0 Comments