ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿದ್ದಂತ ಮಾಜಿ ಸಚಿವ, ಉಡುಪಿಯ ಮಾಜಿ ಶಾಸಕ, ಪ್ರಮೋದ್ ಮಧ್ವರಾಜ್ ಅವರು ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇನ್ನು ಉಡುಪಿ ಜಿಲ್ಲೆಯ ಕಾಂಗ್ರೆಸ್ ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗದ ವಾತಾವರಣವಿದ್ದು, ನಾನು ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇತ್ತೀಚಿಗೆ ನನಗೆ ಕೆಪಿಸಿಸಿ ಉಪಾಧ್ಯಕ್ಷನನ್ನಾಗಿ ನೇಮಿಸಿದ್ದೀರಿ ಅದಕ್ಕಾಗಿ ಧನ್ಯವಾದಗಳು, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರು, ಕಾಂಗ್ರೆಸ್ ಪಕ್ಷದ ಆಡಳಿತದ ಅವಧಿಯಲ್ಲಿ ಕ್ರೀಡಾ ಸಚಿವರಾಗಿದ್ದರು. ಇದೀಗ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್
Subscribe
Login
0 Comments