Thursday, June 19, 2025

ಅತ್ರಾಡಿ ತಾಯಿ ಮಗಳ ಕೊಲೆ ಪ್ರಕರಣ:ಆರೋಪಿ ಹೆಡೆಮುರಿಕಟ್ಟಿದ ಉಡುಪಿ ಪೊಲೀಸರು

ಉಡುಪಿ: ಹಿರಿಯಡ್ಕ ಅತ್ರಾಡಿ ಗ್ರಾಮದ ಮದಗ ಮುಳ್ಳಗುಜ್ಜೆ ಎಂಬಲ್ಲಿ ಮೇ 8ರಂದು ರಾತ್ರಿ ನಡೆದ ತಾಯಿ ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಹರೀಶ್ ಆರ್. ಯಾನೆ ಗಣೇಶ (29) ಬಂಧಿತ ಆರೋಪಿ. ಆರೋಪಿ ಮೃತ ಚೆಲುವಿಯ ದೂರದ ಸಂಬಂಧಿ ಎಂದು ತಿಳಿದು ಬಂದಿದೆ.

ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ನೇತೃತ್ವದಲ್ಲಿ ಹಿರಿಯಡ್ಕ ಎಸ್‌ಐ ಅನಿಲ್ ಬಿ.ಮಾದರ, ಕೋಟ ಎಸ್‌ಐ ಮಧು ಬಿ.ಇ. ಪ್ರೊಬೆಷನರಿ ಎಸ್‌ಐಗಳಾದ ಮಂಜುನಾಥ, ರವಿ ಬಿ.ಕಾರಗಿ ಸಿಬ್ಬಂದಿ ರಾಘವೇಂದ್ರ ಮತ್ತು ನಿತಿನ್ ಅವರ ವಿಶೇಷ ತಂಡವು ಪ್ರಕರಣ ದಾಖಲಾಗಿ 48 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಹರೀಶ್ ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಗಂಡನಿಂದ ದೂರವಾಗಿರುವ ಅವಕಾಶವನ್ನು ಉಪಯೋಗಿಸಿಕೊಂಡು ಆಕೆಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿ ದ್ದನು. ಅಲ್ಲದೇ ಚೆಲುವಿಯನ್ನು ಮದುವೆ ಆಗುವಂತೆ ಒತ್ತಾಯಿಸುತ್ತಿದ್ದನು. ಚೆಲುವಿಯು ಬೇರೆ ಗಂಡಸರೊಂದಿಗೆ ಫೋನಿನಲ್ಲಿ ಮಾತನಾಡುತ್ತಿರುವ ಬಗ್ಗೆ ಸಂಶಯದಿಂದ ದ್ವೇಷಗೊಂಡ ಹರೀಶ್, ಮೇ 8ರಂದು ರಾತ್ರಿ ಚೆಲುವಿ ಮನೆಗೆ ಬಂದಿದ್ದನು. ಅಲ್ಲಿ ಊಟ ಮಾಡಿ ಮಗಳು ಮಲಗಿದ ಬಳಿಕ ಚೆಲುವಿ ಬೇರೆಯವರೊಂದಿಗೆ ಫೋನ್ ನಲ್ಲಿ ಸಂಪರ್ಕದಲ್ಲಿರುವ ವಿಚಾರದಲ್ಲಿ ತಗಾದೆ ತೆಗೆದು ಗಲಾಟೆ ಮಾಡಿದನು. ಚೆಲುವಿ ಮಲಗಿದ್ದ ವೇಳೆ ಚೆಲುವಿಯನ್ನು ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ, ನಂತರ ನಿದ್ರೆಯಲ್ಲಿದ್ದ ಮಗಳು ತನ್ನ ವಿರುದ್ಧ ಸಾಕ್ಷಿ ಹೇಳಬಹುದೆಂದು ಅವಳನ್ನು ಕೂಡಾ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದನು ಎಂದು ತನಿಖೆಯಿಂದ ತಿಳಿದುಬಂದಿದೆ.
ಕೊಲೆ ಮಾಡಿದ ನಂತರ ಚೆಲುವಿಯ ಕುತ್ತಿಗೆಯಲ್ಲಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಚಿನ್ನದ ಸರ ಹಾಗೂ ಮೃತಳು ಉಪಯೋಗಿಸುತ್ತಿದ್ದ ಮೊಬೈಲ್ ಪೋನ್‌ನ್ನು ಹರೀಶ್ ಸುಲಿಗೆ ಮಾಡಿಕೊಂಡು ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles