ಉಡುಪಿ: ಉದ್ಯೋಗ ಸಿಗದ ಹಿನ್ನೆಲೆ ಎಂಬಿಎ ಪಧವೀಧರೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಯುವತಿ ಸಹನಾ(23) ವಿಷ ಸೇವಿಸಿ ಸಾವಿಗೆ ಶರಣಾದ ಯುವತಿ.
ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮಾಡಿದ್ದ ಯುವತಿ ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಕಟ್ಟಿಂಗೇರಿಯ ಅಕ್ಕನ ಮನೆಗೆ ಬಂದು ಸಹನಾ ವಿಷ ಸೇವಿಸಿದ್ದಾಳೆ. ಬಳಿಕ ಉಡುಪಿಯ ಮಿಷನ್ ಆಸ್ಪತ್ರೆ, ಕೆಎಂಸಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು, ಮೂರು ಆಸ್ಪತ್ರೆಗಳಲ್ಲಿ 10 ದಿನ ಚಿಕಿತ್ಸೆ ನೀಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಹನಾ ಸಾವನ್ನಪ್ಪಿದ್ದಾರೆ. ಈ ಸಂಬಂಧ ಉಡುಪಿಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯೋಗ ಸಿಗದ ಹಿನ್ನೆಲೆ ಎಂಬಿಎ ಪಧವೀಧರೆ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಇಂದು ಉಡುಪಿಯಲ್ಲಿ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಉದ್ಯೋಗದ ಸಿಗದೇ ಎಂಬಿಎ ಪಧವೀಧರೆ ಆತ್ಮಹತ್ಯೆ:ಉಡುಪಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ
Subscribe
Login
0 Comments